ಸ್ನೇಹಮಯಿ ಕೃಷ್ಣ/ಸಿದ್ದರಾಮಯ್ಯ(PTI)ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಸಾಮಾಜಿಕ‌ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಜಾರಿ ನಿರ್ದೇಶನಾಲಯ(ಈ.ಡಿ)ಕ್ಕೆ ದೂರು ಸಲ್ಲಿಸಿದ್ದಾರೆ.ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಈ ಮಧ್ಯೆ  ಮುಡಾದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂದು 16 ಪುಟಗಳ ಇ-ಮೇಲ್ ಹಾಗೂ ಪತ್ರ ಬರೆಯುವ ಮೂಲಕ ಜಾರಿ ನಿರ್ದೇಶನಾಲಯದ ಬೆಂಗಳೂರು ನಿರ್ದೇಶಕರಿಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.