ಬೆಂಗಳೂರು : ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿನ ಒಬ್ಬ ಸದಸ್ಯರನ್ನು ಆಯ್ಕೆ ಮಾಡಲು ಜು.12ರಂದು ಉಪ ಚುನಾವಣೆ ನಿಗದಿಪಡಿಸಲಾಗಿತ್ತು. ಜು.5ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದ್ದು, ಕಾಂಗ್ರೆಸ್ ಪಕ್ಷದ ಬಸನಗೌಡ ಬಾದರ್ಲಿ ಮಾತ್ರ ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.  