ಬೆಂಗಳೂರು: ರಾಜ್ಯ ಸರಕಾರವು ಇಬ್ಬರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಸೋಮವಾರ ಆದೇಶ ಹೊರಡಿಸಿದೆ.ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಯೋಜನಾ ನಿರ್ದೇಶಕಿ ಶ್ರೀವಿದ್ಯಾ ಪಿ.ಐ ಅವರನ್ನು ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆಯಾಗಿ ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕಿ ಡಾ. ನಂದಿನಿದೇವಿ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತದ ನಿರ್ದೇಶಕಿಯಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಆದೇಶ ಹೊರಡಿಸಲಾಗಿದೆ.  