ಡಿ.ಕೆ. ಶಿವಕುಮಾರ್ ಹೊಸದಿಲ್ಲಿ: ‘ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಸರಕಾರ ರಚನೆಗೆ ಅಗತ್ಯ ಸಂಖ್ಯಾಬಲ ಹೊಂದಿದ್ದು, ಅವರ ಕಾರ್ಯಚಟುವಟಿಕೆಗಳಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟಣೆ ನೀಡಿದ್ದಾರೆ.ರವಿವಾರ ದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷ ವಿರೋಧ ಪಕ್ಷದ ಸ್ಥಾನದಲ್ಲಿ ನಿಂತು ಜನರ ಹಿತಕ್ಕಾಗಿ ಹೋರಾಡಲು ತೀರ್ಮಾನಿಸಿದ್ದು, ಆ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಇದೇ ವೇಳೆ ತಿಳಿಸಿದರು.  