ಭವಾನಿ ರೇವಣ್ಣ‌ಬೆಂಗಳೂರು : ಮೈಸೂರು ಕೆ.ಆರ್.ನಗರದ ಮಹಿಳೆ ಅಪಹರಣದ ಸಂಚು ರೂಪಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ‌ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.ಈ ಹಿಂದೆ ಸೆಷನ್ಸ್ ಕೋರ್ಟ್ ಭವಾನಿ ರೇವಣ್ಣ‌ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ಈ ಹಿನ್ನಲೆಯಲ್ಲಿ ಬಂಧನದ ಭೀತಿಯಿಂದ ಭವಾನಿ ರೇವಣಣ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.‌ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಪರ ವಕೀಲರಿಂದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದ್ದು, ವಿಚಾರಣೆಗೆ ಬರಬೇಕಿದೆ. ಈಗಾಗಲೇ ಎಸ್ಐಟಿ ನೋಟಿಸ್ ನೀಡಿದ್ದು, ವಿಚಾರಣೆಗೆ ಭವಾನಿ ರೇವಣ್ಣ‌ ಹಾಜರಾಗಿಲ್ಲ.