ಬೆಂಗಳೂರು: "ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ಸದಾಶಿವನಗರ ನಿವಾಸದ ಬಳಿ ಶನಿವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು,"ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 3-4 ಸ್ಥಾನ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಮಾಹಿತಿ ತೋರಿಸುತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ " ಎಂದರು.