ಕೇರಳ: ಶಿರೂರಿನ ಭೂಕುಸಿತದಲ್ಲಿ  ನಾಪತ್ತೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್ ರ ಮೃತದೇಹ ಹಾಗೂ ಲಾರಿಯನ್ನು ಪತ್ತೆ ಹಚ್ಚುವಲ್ಲಿ ರಾಜ್ಯ ಸರ್ಕಾರ  ಯಶಸ್ವಿಯಾಗಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಕೇರಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ  ಉತ್ತರ ಕನ್ನಡ ಜಿಲ್ಲೆಯಲ್ಲಿನ ಶಿರೂರು ಭೂಕುಸಿತದಲ್ಲಿ ಅರ್ಜುನ್ ಲಾರಿ ರಸ್ತೆ  ಪಕ್ಕದಲ್ಲಿದ್ದ ನದಿಗೆ  ಬಿದ್ದಿದ್ದು ನಾಪತ್ತೆಯಾಗಿತ್ತು. ಕರ್ನಾಟಕ ಉಸ್ತುವಾರಿ ವೇಣುಗೋಪಾಲ್ ಅವರು ಶೋಧಕಾರ್ಯವನ್ನು ಮುಂದುವರೆಸಲು ಸೂಚಿಸಿದ್ದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.