ಕಾರವಾರ : ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ.ಕಳೆದ ಆರು ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಇಂದು(ಸೆ.25) ಅರ್ಜುನ್ ಹಾಗೂ ಅವರ ಲಾರಿಯು ನದಿಯಲ್ಲಿ ಪತ್ತೆಯಾಗಿದೆ. ಈ ಸಂದರ್ಭ ಅರ್ಜುನ್‌ ಅವರ ಮೃತದೇಹ ಲಾರಿಯಲ್ಲೇ ಸಿಕ್ಕಿದೆ ಎಂದು ತಿಳಿದು ಬಂದಿದೆ.