ಬೆಂಗಳೂರು: "ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ" ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.ಜನಪ್ರತಿನಿಧಿಗಳ ನ್ಯಾಯಾಲಯದ​ ತೀರ್ಪಿನ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಜನಪ್ರತಿನಿಧಿಗಳ ನ್ಯಾಯಾಲಯವು ನಿನ್ನೆಯ ಹೈಕೋರ್ಟ್‌ ಆದೇಶ ನೀಡಿದಂತೆ 17ಎ ಪ್ರಕಾರ ತನಿಖೆ ಮಾಡಲು ಅನುಮತಿ ನೀಡಲಾಗಿದೆ. ಆದೇಶದ ಪ್ರತಿ ನನಗೆ ದೊರೆತಿಲ್ಲ.ಆದೇಶವನ್ನು ಪೂರ್ಣವಾಗಿ ಓದಿದ ನಂತರ ಪ್ರತಿಕ್ರಿಯೆ ನೀಡುವೆ" ಎಂದರು.ಮೈಸೂರಿಗೆ ಲೋಕಾಯುಕ್ತಕ್ಕೆ  ಶಿಫಾರಸು :"ನನಗೆ ತಿಳಿದಂತೆ ಮೈಸೂರು ಲೋಕಾಯುಕ್ತಕ್ಕೆ ಪ್ರಕರಣವನ್ನು ಶಿಫಾರಸು ಮಾಡಲಾಗಿದೆ. ಮೈಸೂರಿನಲ್ಲಿಯೇ ದೂರು ನೀಡಲಾಗಿದ್ದು, ದೂರುದಾರರು ಮೈಸೂರಿನವರು, ಮುಡಾ ಕೂಡ ಅಲ್ಲಿಯೇ ಇರುವುದರಿಂದ  ಮೈಸೂರಿಗೆ ಶಿಫಾರಸು ಮಾಡಿರಬೇಕು  ಎಂದು ಭಾವಿಸಿದ್ದೇನೆ” ಎಂದರು.ಪಿ.ಎನ್.ದೇಸಾಯಿಯವರ ಆಯೋಗದ ತನಿಖೆ  ಮುಂದುವರೆಯಲಿದೆ :ಇಂದಿನ ಪೂರ್ಣ ಆದೇಶ ಸಿಕ್ಕಿದ ಮೇಲೆ ವಕೀಲರೊಂದಿಗೆ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು. ಮುಡಾ ಪ್ರಕರಣದ ತನಿಖೆಗೆ ಸರಕಾರ ರಚಿಸಿದ್ದ ನಿವೃತ್ತ ನ್ಯಾ.ಪಿ.ಎನ್.ದೇಸಾಯಿಯವರ ಆಯೋಗದ ಮುಂದುವರೆಯಲಿದೆ ಎಂದರು.