ಬೆಂಗಳೂರು : ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದ.ಕೆ. ಅವರ ಹೆಸರನ್ನು ಜೆಡಿಎಸ್‌ ಪಕ್ಷ ಘೋಷಣೆ ಮಾಡಿದೆ.ಈ ಕುರಿತು ಬುಧವಾರ ಪತ್ರಿಕಾ ಪ್ರಕರಣೆ ಹೊರಡಿಸಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್‌ ಈಗಾಗಲೇ ತಮ್ಮ ಅಭ್ಯರ್ಥಿಗಳನ್ನು ಪ್ರಕಟಿಸಿದೆ. 