ಬೆಂಗಳೂರು : ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ   ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಮೊಹಮ್ಮದ್ ಮತೀನ್ ತಾಹಾ ಮತ್ತು ಮುಸಾವಿರ್ ಹುಸೇನ್ ಎಂಬುವರಿಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಎನ್‍ಐಎ ವಿಶೇಷ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ.   ಆರೋಪಿಗಳ ಎನ್‍ಐಎ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಹೀಗಾಗಿ ಆರೋಪಿಗಳನ್ನು ಎನ್‍ಐಎ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.  ಮಾ.1ರಂದು ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ನಡೆದಿತ್ತು. ಎನ್‍ಐಎ ಅಧಿಕಾರಿಗಳು ಇಬ್ಬರು ಪ್ರಮುಖ ಆರೋಪಿಗಳನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದರು. ಸದ್ಯ ಪ್ರಕರಣದ ಮತ್ತಷ್ಟು ವಿಚಾರಣೆಗಾಗಿ ಆರೋಪಿಗಳಾದ ಮುಸಾವೀರ್ ಹುಸೇನ್ ಹಾಗೂ ಮತೀನ್ ತಾಹಾರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.  