ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್/ಸಿಎಂ ಸಿದ್ದರಾಮಯ್ಯಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಆ ಮೂಲಕ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದೆ.ಈ ಬೆನ್ನಲ್ಲೇ ಕಾಂಗ್ರೆಸ್‌, ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕಾಂಗ್ರೆಸ್‌, "ಹೋರಾಟ ಮುಂದುವರೆಯಲಿದೆ, ಸರಕಾರವನ್ನು ಅಸ್ಥಿರಗೊಳಿಸುವ ರಾಜ್ಯಪಾಲರ ಪ್ರಯತ್ನಕ್ಕೆ, ಬಿಜೆಪಿಯ ಷಡ್ಯಂತ್ರಕ್ಕೆ ಬಗ್ಗುವ ಪ್ರಶ್ನೆಯೇ ಇಲ್ಲ" ಎಂದು ತಿಳಿಸಿದೆ."ರಾಜ್ಯಪಾಲರು ಕುಮಾರಸ್ವಾಮಿ ಹಾಗೂ ಇತರ ಬಿಜೆಪಿ ನಾಯಕರ ಬಗೆಗಿನ ದೂರುಗಳನ್ನು ಮುಚ್ಚಿಡಲು ಪ್ರಯತ್ನಿಸಿದ್ದು ಜಗಜ್ಜಾಹೀರಾಗಿದೆ. ಈ ಬಗ್ಗೆ ದೂರುಗಳು ಹೇಗೆ ಸೋರಿಕೆಯಾದವು ಎಂದು ರಾಜ್ಯಪಾಲರ ಪ್ರಶ್ನೆಯೇ ಅವರ ತಾರತಮ್ಯದ ರಾಜಕೀಯಕ್ಕೆ ಪುರಾವೆ ಒದಗಿಸುತ್ತವೆ" ಎಂದು ಅಸಮಾಧಾನ ವ್ಯಕ್ತಪಡಿಸಿದೆ. 