ತೇಜಸ್ವಿ ಸೂರ್ಯಬೆಂಗಳೂರು: ಧರ್ಮದ ಹೆಸರಿನಲ್ಲಿ ಮತ ಯಾಚಿಸಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಚುನಾವಣಾ ಆಯೋಗವು ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲಿಸಿದೆ.ತಮ್ಮ ಎಕ್ಸ್‌ ಹ್ಯಾಂಡಲ್‌ನಲ್ಲಿ ವೀಡಿಯೋ ಪೋಸ್ಟ್‌ ಮಾಡಿ ಈ ಮೂಲಕ ಧರ್ಮದ ಆಧಾರದಲ್ಲಿ ಮತ ಯಾಚಿಸಿದ್ದಕ್ಕಾಗಿ ತೇಜಸ್ವಿ ಸೂರ್ಯ ವಿರುದ್ಧ  ಸೆಕ್ಷನ್‌ 123(3) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.   