ಶಿವಮೊಗ್ಗ, ಎ.22: ಹುಬ್ಬಳ್ಳಿಯ ಎಂಸಿಎ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಗೆ  ಸೂಕ್ತ ನ್ಯಾಯ ದೊರಕಿಸಬೇಕಿದೆ. ಆದ್ದರಿಂದ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು. ಪ್ರಕರಣದ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. 