ಸಿಎಂ ಸಿದ್ದರಾಮಯ್ಯಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ತೀರ್ಪುನ್ನು ಹೈಕೋರ್ಟ್ ನಾಳೆ(ಸೆ.24) ಪ್ರಕಟಿಸಲಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ತೀರ್ಪುನ್ನು ಕಾಯ್ದಿರಿಸಿತ್ತು.ಮಂಗಳವಾರ ಮಧ್ಯಾಹ್ನ‌ 12 ಗಂಟೆಗೆ ತೀರ್ಪು ಹೊರಬೀಳುವ ಸಾಧ್ಯತೆ ಇದೆ.