ಕೋಲಾರ : ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಸಚಿವ ಕೆ.ಎಚ್ ಮುನಿಯಪ್ಪ ಕುಟುಂಬಕ್ಕೆ ನೀಡಿದರೆ ಜಿಲ್ಲೆಯ‌ ಐದು ಜನ ಶಾಸಕರು ರಾಜಿನಾಮೆ ನೀಡುವುದಾಗಿ ಕಾಂಗ್ರೆಸ್‌‌ ಶಾಸಕರು ಹೈಕಮಾಂಡ್ ಗೆ ಎಚ್ಚರಿಕೆ ನೀಡಿದ್ದಾರೆ.ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಸಚಿವ ಎಂ.ಸಿ.ಸುಧಾಕರ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ನಸೀರ್ ಅಹ್ಮದ್ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.ಎಲ್ಲಾ ಶಾಸಕರು ಇಂದು ಮಧ್ಯಾಹ್ನ ಮೂರು ಗಂಟೆಗೆ ಮಂಗಳೂರಿಗೆ ತೆರಳಿ ಸ್ಪೀಕರ್ ಖಾದರ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.ಸಂಧಾನ ವಿಫಲ: ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್‌ ಅವರು ತಮ್ಮ ಮನೆಯಲ್ಲಿ ಶಾಸಕರ ಜೊತೆ ಸಂಧಾನ ಸಭೆ ನಡೆಸಿದ್ದು, ಆ ಸಭೆ ವಿಫಲವಾಗಿದೆ ಎಂದು ಗೊತ್ತಾಗಿದೆ. ಯಾವುದೇ ಕಾರಣಕ್ಕೂ ಮುನಿಯಪ್ಪ ಅವರ ಕುಟುಂಬದವರಿಗೆ ಟಿಕೆಟ್‌ ನಿಡಬಾರದು ಎಂದು ಎಲ್ಲ ಐದು ಶಾಸಕರು ಪಟ್ಟು ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.