 ಬೆಂಗಳೂರು: ಹೈದರಾಬಾದ್​​  ಮತ್ತು ಬೆಂಗಳೂರಿನಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿರುವ ಮೇಘನಾ ಫುಡ್ಸ್​ ಕಂಪನಿಗೆ ಸಂಬಂಧಿಸಿದ​ 10ಕ್ಕೂ ಹೆಚ್ಚು ಕಡೆ ಇದೀಗ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಆದಾಯ ತೆರಿಗೆ ಪಾವತಿಯಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಸದ್ಯ ಐಟಿ ಅಧಿಕಾರಿಗಳು ದಾಳಿ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೈದರಾಬಾದ್​​  ಮತ್ತು ಬೆಂಗಳೂರು ನಗರಗಳಲ್ಲಿ ಹೆಚ್ಚು ಹೆಸರುವಾಸಿಯಾದ ಮೇಘನಾ ಫುಡ್ಸ್, ತನ್ನ ಹೋಟೆಲ್ ಮತ್ತು ರೆಸ್ಟೋರೆಂಟ್​ಗಳನ್ನು ಬೆಂಗಳೂರಿನ ಕೋರಮಂಗಲ, ಇಂದಿರಾನಗರ, ಜಯನಗರದಲ್ಲಿರುವ ಶಾಖೆಗಳನ್ನು ನಡೆಸುತ್ತಿವೆ.ಐ ಟಿ ಅಧಿಕಾರಿಗಳು ಕರ್ನಾಟಕ ಮತ್ತು ಗೋವಾ ವಿಭಾಗದಿಂದ ಆಗಮಿಸಿದ್ದಾರೆ ಎನ್ನಲಾಗಿದೆ. 