ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಸದಾಶಿವ ನಗರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಸಂತ್ರಸ್ಥ ಬಾಲಕಿಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವಗರ ಠಾಣೆಯಲ್ಲಿ ಎಫ್‌ ಐ ಆರ್ ದಾಖಲಾಗಿದ್ದು, ಪೋಕ್ಸೋ ಕೇಸ್ ನಲ್ಲಿ ನಿರೀಕ್ಷಣಾ ಜಾಮೀನು ಸಿಗುವ ಅವಕಾಶ ಇಲ್ಲದ ಕಾರಣ ಯಡಿಯೂರಪ್ಪ ಅವರ ಬಂಧನಕ್ಕೆ ಸಾಧ್ಯತೆ ಇದೆ ಎನ್ನಲಾಗಿದೆ. ‌ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಸಹಾಯ ಪಡೆಯಲು  ಹೋಗಿದ್ದಾಗ ಈ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಸಂತ್ರಸ್ತ ಬಾಲಕಿಯ ತಾಯಿ ಆರೋಪಿಸಿದ್ದಾರೆ.ದೂರಿನ ವಿವರ"ನನ್ನ ಮಗಳ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತನಿಖೆಯನ್ನು ಎಸ್‌ ಐಟಿ ಗೆ ವಹಿಸುವಂತೆ ಆಗ್ರಹಿಸಿ ಫೆಬ್ರವರಿ 2 ರಂದು ಯಡಿಯೂರಪ್ಪ ಅವರ ಬಳಿ ನಾನು ಮತ್ತು ಮಗಳು ತೆರಳಿದ್ದ ವೇಳೆ ಲೈಂಗಿಕ ದೌರ್ಜನ್ಯದ ಘಟನೆ ನಡೆದಿದೆ. 9 ನಿಮಿಷಗಳ ಕಾಲ ನಮ್ಮೊಂದಿಗೆ ಮಾತನಾಡಿದ್ದ‌ ಅವರು, ನನ್ನ ಮಗಳ ಕೈ ಹಿಡಿದುಕೊಂಡಿದ್ದರು. ನನ್ನ ಮಗಳು ಯಡಿಯೂರಪ್ಪ ಅವರನ್ನು ʼತಾತʼ ಅಂತಲೇ ಕರೆದು ಮಾತನಾಡುತ್ತಿದ್ದಳು. ನಂತರ ಮಗಳನ್ನು ರೂಮ್‌ ಗೆ ಕರೆದುಕೊಂಡು ಹೋದ ಅವರು ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ" ಎಂದು 17 ವರ್ಷದ ಅಪ್ರಾಪ್ತೆಯ ತಾಯಿ, ಪೋಲಿಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.