ಬೆಂಗಳೂರು: ಬಿಜೆಪಿಯ ಲೋಕಸಭಾ ಚುನಾವಣಾ ನಿರ್ವಹಣಾ ಸಮಿತಿಯ ರಾಜ್ಯ ಸಂಚಾಲಕ ಹಾಗೂ ಸಹ ಸಂಚಾಲಕರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.  ರಾಜ್ಯ ಸಂಚಾಲಕರಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್, ಸಹ ಸಂಚಾಲಕರನ್ನಾಗಿ ವಿನಯ್ ಬಿದರೆ ಹಾಗೂ ಭಾರತಿ ಶೆಟ್ಟಿಯನ್ನು ನಿಯುಕ್ತಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.  