ಬೆಂಗಳೂರು, ಸೆ.21: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ   ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ನಿಯೋಗದಿಂದ ದೂರು ನೀಡಲಾಗಿದೆ.ಮೀಸಲಾತಿ ಬಗ್ಗೆ ಅಮೆರಿಕದಲ್ಲಿ ರಾಹುಲ್ ಗಾಂಧಿ  ನೀಡಿರುವ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ದೂರು ಸಲ್ಲಿಸಲಾಗಿದೆ.ಈ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜಕುಮಾರ್ ಪಾಟೀಲ್, ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ವಸಂತಕುಮಾರ್​ ಸಹಿತ ಬಿಜೆಪಿ ನಾಯಕರು ಇದ್ದರು.