ಬೆಂಗಳೂರು: ರಾಜ್ಯ ಸರಕಾರದ ವಕ್ತಾರರನ್ನಾಗಿ ಸಚಿವರಾದ ದಿನೇಶ್‌ ಗುಂಡೂರಾವ್‌ , ಕೃಷ್ಣ ಬೈರೇಗೌಡ, ಪ್ರಿಯಾಂಕ್‌ ಖರ್ಗೆ, ಈಶ್ವರ್‌ ಖಂಡ್ರೆ ಹಾಗೂ ಸಂತೋಷ್‌ ಲಾಡ್‌ ಅವರನ್ನು ನೇಮಕ ಮಾಡಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.ಸಚಿವರು ಸರಕಾರದ ಸಾಧನೆಗಳು, ದಾಖಲೆಗಳು ಮತ್ತು ಮಾಹಿತಿಗಳನ್ನು ಕಾಲಕಾಲಕ್ಕೆ ಒದಗಿಸಲು ಅಗತ್ಯ ಕ್ರಮವಹಿಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಸೂಕ್ತ ನಿರ್ದೇಶನ ನೀಡಲು ಆದೇಶದಲ್ಲಿ ಸೂಚಿಸಲಾಗಿದೆ. 