ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪ ಎದುರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್‌ ವಿರುದ್ಧ ಜಾರಿ ನಿರ್ದೇಶನಾಲಯ 120ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್​ ವಜಾಗೊಳಿಸಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.ಪ್ರಕರಣದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ಆದೇಶ ನೀಡಿದೆ.