ಸಾಂದರ್ಭಿಕ ಚಿತ್ರಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ತಂಡ(ಎನ್‌ಐಎ) ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿರುವುದಾಗಿ ವರದಿಯಾಗಿದೆ.ಮಾ.1ರಂದು ವೈಟ್‌ಫೀಲ್ಡ್ನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ ಗಂಭೀರತೆಯನ್ನು ಅರಿತು ಎನ್‌ಐಎ ಅಧಿಕಾರಿಗಳು ಸ್ವಪ್ರೇರಿತವಾಗಿ ಮೊಕದ್ದಮೆ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಗೊತ್ತಾಗಿದೆ.  ಈಗಾಗಲೇ ಬೆಂಗಳೂರಿನ ಎಚ್‌ಎಎಲ್ ಠಾಣೆಯಲ್ಲಿ ಸ್ಪೋಟ ಕುರಿತು ಪ್ರಕರಣ ದಾಖಲಾಗಿ ಸಿಸಿಬಿಗೆ ವಹಿಸಲಾಗಿತ್ತು. ಈ ನಡುವೆ ಬಾಂಬ್ ಸ್ಪೋಟ ಪ್ರಕರಣದ ತೀವ್ರತೆ ಹಿನ್ನೆಲೆಯಲ್ಲಿ ಎನ್‌ಐಎ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.