Photo: FB.com/ Siddaramaiah.Officialಬೆಂಗಳೂರು: ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.ಈ ಬಗ್ಗೆ  ಎಕ್ಸ್‌ ನಲ್ಲಿ ಪೋಸ್ಟ್ ಮಾಡಿರುವ ಅವರು,  ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಫ್. ಎಸ್ .ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು.ಕೂಗುವವರಿಗೆ ವಿಧಾನಸೌಧ ಆದರೇನು? ಬೇರೆ ಎಲ್ಲಾದರೇನು? ಅಪರಾಧ ಅಪರಾಧವೇ. ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಬೀತಾದರೆ ಯಾರೇ ಆಗಲಿ ಅಂಥವರ ಮೇಲೆ ಕಠಿಣ ಕ್ರಮ ವಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ದೇಶವಿರೋಧಿ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಫ್.ಎಸ್.ಎಲ್ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ. pic.twitter.com/yTWzb8gy7E 