ಬೆಂಗಳೂರು : ರಾಜ್ಯದ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮತದಾನದ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಟ್ಟು 223 ಮತದಾರರಲ್ಲಿ 222 ಮತದಾರರು ತಮ್ಮ ಮತವನ್ನು ಚಲಾವಣೆ ಮಾಡಿದ್ದಾರೆ. ಶೇ. 99.5% ಮತದಾನ ದಾಖಲಾಗಿದ್ದು, ಮತ ಎಣಿಕೆ ಪ್ರಕ್ರಿಯೆಯು  ಸಂಜೆ 5.00 ಗಂಟೆಗೆ ವಿಧಾನ ಸೌಧದ ಕೊಠಡಿ ಸಂಖ್ಯೆ.106ರಲ್ಲಿ ಆರಂಭವಾಗಲಿದೆ.ಯಲ್ಲಾಪುರ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಹೊರತುಪಡಿಸಿ ಎಲ್ಲಾ ಶಾಸಕರು ಮತದಾನ ಮಾಡಿದ್ದಾರೆ.