ಬೆಂಗಳೂರು: ಸುಳ್ಳು ಸುದ್ದಿ ತಡೆಗಟ್ಟಲು ಐಟಿಬಿಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡ ಹಾಗೂ ವಿಶೇಷ ಕೋಶ ರಚನೆ ಮಾಡಲಾಗುವುದು. ಡೀಫ್​ ಫೇಕ್​​ ಹಾಗೂ ಸೈಬರ್ ಕ್ರೈಂ ತಡೆಗೆ 43 ಹೊಸ ಪೊಲೀಸ್​ ಸಿಇಎನ್​ ಠಾಣೆ ಆರಂಭಿಸಲಾಗುವುದು ಎಂದು ಬಜೆಟ್‌ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.