ಆರ್‌.ಅಶೋಕ್‌/ಶೋಭಾ ಕರಂದ್ಲಾಜೆಮಂಡ್ಯ :  ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್​​ಐಆರ್​​ ದಾಖಲಾಗಿದೆ.   ನಾಗಮಂಗಲ‌ ಗಲಭೆಗೆ ಪ್ರಕರಣಕ್ಕೆ ಸಂಬಂಧಿಸಿಲ್ಲದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ, ಗಲಭೆಗೆ ಪ್ರಚೋದನೆ ಆರೋಪಡಿ ಅಶೋಕ್ ಮತ್ತು ಶೋಭಾ ಕರಂದ್ಲಾಜೆ ವಿರುದ್ಧ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.  ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್ 192ರ ಅಡಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ (ಸುವೋ ಮೋಟೋ) ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.  