ಎಚ್.​ಡಿ ದೇವೇಗೌಡಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್.​ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಗುರುವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.ದೇವೇಗೌಡ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.ಸದ್ಯ ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯ ಇಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. 