Photo: PTIಬೆಂಗಳೂರು: ಕೇಂದ್ರ ಸರಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅನುದಾನ ವಿಚಾರವಾಗಿ ಸಂಸತ್‍ನಲ್ಲಿ ಅತಿ ದೊಡ್ಡ ಸುಳ್ಳು ಹೇಳಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಟೀಕಿಸಿದ್ದಾರೆ.  ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ಒಂದೇ ಒಂದು ರೂಪಾಯಿ ನಮಗೆ ಬಂದಿಲ್ಲ. ಅತಿ ದೊಡ್ಡ ಸುಳ್ಳನ್ನ ಸಂಸತ್‍ನಲ್ಲಿ ನಿರ್ಮಾಲಾ ಸೀತರಾಮನ್ ಹೇಳಿದ್ದಾರೆ ಎಂದು ಆರೋಪಿಸಿದರು.  ಕರ್ನಾಟಕದಿಂದ ಆಯ್ಕೆ ಆಗಿರುವ ಸಚಿವೆ ಸುಳ್ಳು ಹೇಳಿದ್ದು ಬೇಸರ ತರಿಸಿದೆ. ಬರ ಸಂಬಂಧ ರಾಜ್ಯದಲ್ಲಿ ಸಮೀಕ್ಷೆ ಕೆಲಸ ಮಾಡಿಕೊಂಡು ಹೋಗಿದ್ದರು. ಆದರೆ ಹಣ ಬಿಡುಗಡೆ ಮಾಡಿಲ್ಲ. ನಮಗೆ ಕೊಡಬೇಕಾದ ಎನ್‍ಡಿಆರ್‌ಎಫ್ ಅನುದಾನ ನೀಡಿ ಎಂದು ಅವರು ಒತ್ತಾಯಿಸಿದರು.  