ಸಾಂದರ್ಭಿಕ ಚಿತ್ರಶಿವಮೊಗ್ಗ: ಜಿಲ್ಲೆಯಲ್ಲಿ ಒಂದೇ ದಿನ 11 ಮಂದಿಗೆ ಮಂಗನ ಕಾಯಿಲೆ (ಕೆಎಫ್‌ಡಿ)ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇದರಿಂದ ರಾಜ್ಯದಲ್ಲಿ ಕೆಎಫ್‌ಡಿ ಸಕ್ರಿಯ ಪ್ರಕರಣಗಳ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.11 ಸೋಂಕಿತರ ಪೈಕಿ 3 ಮಂದಿ ತೀರ್ಥಹಳ್ಳಿ, 8 ಮಂದಿ ಹೊಸನಗರ ತಾಲೂಕಿನವರು ಎಂದು ತಿಳಿದು ಬಂದಿದೆ. ಜಿಲ್ಲೆಯಲ್ಲಿ ಸದ್ಯ 13 ಸಕ್ರೀಯ ಪ್ರಕರಣಗಳಿವೆ. ಈವರೆಗೂ ಮಂಗನ ಕಾಯಿಲೆಗೆ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.  