ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಎನ್.ಎ.ಹಾರಿಸ್, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮ ಅಧ್ಯಕ್ಷರಾಗಿ ಕನೀಝ್ ಫಾತಿಮಾ, ನಗರ ನೀರು ಸರಬರಾಜು ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ವಿನಯ್ ಕುಲಕರ್ಣಿ, ಕರ್ನಾಟಕ ಮಾರ್ಕೇಟಿಂಗ್ ಕನ್ಸ್ ಲ್ಟೆಂಡ್ ಅಂಡ್ ಏಜೆನ್ಸಿಸ್ ಅಧ್ಯಕ್ಷರಾಗಿ ಸತೀಶ್ ಕೃಷ್ಣ ಸೈಲ್ ಸೇರಿದಂತೆ 36 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಲಭಿಸಿದೆ.  ಶುಕ್ರವಾರ ರಾಜ್ಯ ಸರಕಾರವು ಬಿಡುಗಡೆ ಮಾಡಲಾಗಿರುವ ಪಟ್ಟಿಯಲ್ಲಿ 36 ಶಾಸಕರನ್ನು ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಆದೇಶ ಹೊರಡಿಸಿದ್ದು, ಇಂದಿನಿಂದ (ಜ.26) ಎರಡು ವರ್ಷಗಳ ಅವಧಿಗೆ ನೇಮಿಸಿ ಆದೇಶಿಸಲಾಗಿದೆ.1. ಹಂಪನಗೌಡ ಬಾದರ್ಲಿ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ2. ಅಪ್ಪಾಜಿ ಸಿ.ಎಸ್.ನಾಡಗೌಡ: ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್3. ಭರಮಗೌಡ ಅಲಗೌಡ ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)4. ಎಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ5. ಎಸ್.ಆರ್.ಶ್ರೀನಿವಾಸ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ6. ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ7. ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ8. ಎಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ9. ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ.  10. ಎನ್.ಎ.ಹ್ಯಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ11. ಕೌಜಲಗಿ ಮಹಾಂತೇಶ್ ಶಿವಾನಂದ: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ12.ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್‌13.ಜಿ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ14. ರಾಜಾ ವೆಂಕಟಪ್ಪ ನಾಯಕ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ15. ಬಿ.ಕೆ.ಸಂಗಮೇಶ್ವರ: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ (ಲ್ಯಾಂಡ್ ಆರ್ಮಿ).  16. ಕೆ.ಎಂ.ಶಿವಲಿಂಗೇಗೌಡ: ಕರ್ನಾಟಕ ಗೃಹ ಮಂಡಳಿ17. ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ18. ಬೇಳೂರು ಗೋಪಾಲಕೃಷ್ಣ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ19. ಎಸ್.ಎನ್.ನಾರಾಯಣಸ್ವಾಮಿ: ಕೆಯುಡಿಐಸಿ ಮತ್ತು ಎಫ್‍ಸಿ20.ಪಿ.ಎಂ.ನರೇಂದ್ರಸ್ವಾಮಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ21. ಟಿ.ರಘುಮೂರ್ತಿ: ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ22. ಎ.ಬಿ.ರಮೇಶ್ ಬಂಡಿಸಿದ್ದೇಗೌಡ: ಚೆಸ್ಕಾಂ.  23. ಬಿ.ಶಿವಣ್ಣ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ24. ಎಸ್.ಎನ್.ಸುಬ್ಬಾರೆಡ್ಡಿ: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ25. ವಿನಯ್ ಕುಲಕರ್ಣಿ: ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ26. ಅನಿಲ್ ಚಿಕ್ಕಮಾದು: ಜಂಗಲ್ ಲಾಡ್ಜಸ್27. ಬಸನಗೌಡ ದದ್ದಲ್: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ28. ಕನಿಝ್ ಫಾತಿಮಾ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ.  29. ವಿಜಯಾನಂದ ಕಾಶಪ್ಪನರ್: ಕರ್ನಾಟಕ ಕ್ರೀಡಾ ಪ್ರಾಧಿಕಾರ30. ಶ್ರೀನಿವಾಸ ಮಾನೆ: ಡಿಸಿಎಂ ರಾಜಕೀಯ ಸಲಹೆಗಾರ31. ಟಿ.ಡಿ.ರಾಜೇಗೌಡ: ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ32. ಎಂ.ರೂಪಕಲಾ: ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ33. ಸತೀಶ್ ಕೃಷ್ಣ ಸೈಲ್: ಕರ್ನಾಟಕ ಮಾರ್ಕೇಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸಿಸ್34. ಶರತ್ ಬಚ್ಚೇಗೌಡ: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ35. ಜಿ.ಎಂ.ಗಣೇಶ್: ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ36. ಬಸವನಗೌಡ ತುರುವಿಹಾಳ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ.       