ಸಾಹಿತಿ ನಾ. ಡಿಸೋಜಬೆಂಗಳೂರು: ಹಿರಿಯ ಸಾಹಿತಿ ನಾ. ಡಿಸೋಜ ಅವರು ಕರ್ನಾಟಕ ಸರ್ಕಾರ ನೀಡುವ ಪ್ರತಿಷ್ಠಿತ ‘ಪಂಪ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.ಐದು ಲಕ್ಷ ರೂ. ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡ ಈ ಪ್ರಶಸ್ತಿ ಪ್ರದಾನ ಸಮಾರಂಭವು  ಜ.31 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ  ನಡೆಯಲಿದೆ.ಇನ್ನಿಬ್ಬರು ಸಾಹಿತಿಗಳಾದ ಹಾಸನದ ಬಾನು ಮುಷ್ತಾಕ್ ಅವರು ಅತ್ತಿಮಬ್ಬೆ ಪ್ರಶಸ್ತಿ ಹಾಗೂ, ಮಂಗಳೂರಿನ ಸದಾನಂದ ಸುವರ್ಣ ಅವರು ಬಿ ವಿ ಕಾರಂತ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.