ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಳಿಗ್ಗೆ ಕಲಬುರಗಿಯ ತಿಮ್ಮಾಪುರಿ ವೃತದಲ್ಲಿ ಇರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾಪರ್ಣೆ ಮಾಡಿದರು.ಈ ಸಂದರ್ಭದಲ್ಲಿ ಕೆ.ಕೆ.ಆರ್.ಡಿ ಅಧ್ಯಕ್ಷ ಶಾಸಕ ಡಾ. ಅಜಯ ಸಿಂಗ್, ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ, ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷ ಲಕ್ಷ್ಮಣ ದಸ್ತಿ ಸೇರಿದಂತೆ ಇತರರು ಇದ್ದರು.ನಂತರ ಮುಖ್ಯಮಂತ್ರಿಗಳು ಕಲಬುರಗಿ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ನಿಮಿತ್ತ ಧ್ವಜಾರೋಹಣ ನಿರ್ವಹಿಸಿದರು.ಇಂದು ಸಂಜೆ 4 ಗಂಟೆಗೆ ಕಲಬುರಗಿ ಮಿನಿ ವಿಧಾನ ಸೌಧದಲ್ಲಿ 19ನೇ ಸಚಿವ ಸಂಪುಟ ನಡೆಯಲಿದೆ.