ಬೆಂಗಳೂರು : ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮೇಲೆ ಸಿಸಿಬಿ ಪೊಲೀಸರು ದಾಳಿ ಕೈಗೊಂಡು ತಪಾಸಣೆ ನಡೆಸಿ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಮತ್ತು ಆತನ ಸಹಚರರ ಸುಮಾರು 18 ಮೊಬೈಲ್‍ಗಳನ್ನು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.  ಇತ್ತೀಚೆಗೆ ಕೊಲೆ ಪ್ರಕರಣದ ಆರೋಪಿ ದರ್ಶನ್ ಜೊತೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಇರುವ ಫೋಟೋ ವೈರಲ್ ಆಗಿತ್ತು. ರೌಡಿಶೀಟರ್ ವಿಲ್ಸನ್‍ಗಾರ್ಡನ್ ನಾಗ ಜೈಲಿನಿಂದಲೇ ಹಲವರಿಗೆ ಧಮ್ಕಿ ಹಾಕುತ್ತಿದ್ದನು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿ 18 ಮೊಬೈಲ್‍ಗಳು, ಡ್ರಗ್ಸ್ ಹಾಗೂ ಹಣವನ್ನು ಜಪ್ತಿ ಮಾಡಿರುವುದಾಗಿ ತಿಳಿದುಬಂದಿದೆ.  ಈ ಬಗ್ಗೆ ತನಿಖೆ ಮುಂದುವರೆಸಿರುವ ಸಿಸಿಬಿ ಅಧಿಕಾರಿಗಳು ಜೈಲಿನ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಖೈದಿಗಳ ಮೇಲೆ ನಿಗಾ ವಹಿಸುವಂತೆ ಸೂಚಿಸಿದ್ದು, ವಶಪಡಿಸಿಕೊಂಡ ವಸ್ತುಗಳ ಆಧಾರದ ಮೇಲೆ ಕಾನೂನು ಕ್ರಮ ಕೈಗೊಂಡಿರುವುದಾಗಿ ಮೂಲಗಳು ತಿಳಿಸಿವೆ.  