Monish (Photo credit: X@siddaramaiahಬೆಂಗಳೂರು, ಜ.22: ರಾಜ್ಯಮಟ್ಟದ ಫುಟ್ಬಾಲ್ ಆಟಗಾರ ಮೊನೀಷ್ ಕೆ. (28) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಮೊನೀಷ್ ಶನಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಹೊರಮಾವು ಸಮೀಪ ಲಾರಿಯೊಂದು ಅವರ ಬೈಕಿಗೆ ಢಿಕ್ಕಿ ಹೊಡೆದಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೊನೀಷ್ ರವಿವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.   ಸೆಂಟರ್ ಮಿಡ್ ಫೀಲ್ಡರ್ ಆಗಿದ್ದ ಮೊನೀಷ್ ಬೆಂಗಳೂರು ಈಗಲ್ಸ್ ತಂಡದಲ್ಲಿ ಆಡುತ್ತಿದ್ದರು.   ಮೊನೀಶ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.ರಾಜ್ಯದ ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ, ಈಗ ಆ ನಂಬಿಕೆ ಹುಸಿಯಾಗಿದೆ. ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ… pic.twitter.com/rl5TWvtxyQ 'ರಾಜ್ಯದ ಖ್ಯಾತ ಫುಟ್ಬಾಲ್ ಆಟಗಾರ ಮೊನೀಶ್ ಕೆ. ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ, ಈಗ ಆ ನಂಬಿಕೆ ಹುಸಿಯಾಗಿದೆ. ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ ಪ್ರತಿಭೆಯೊಂದು ಹೀಗೆ ಆರಂಭದಲ್ಲೇ ಅಂತ್ಯ ಕಂಡಿದ್ದು ಅತ್ಯಂತ ದುಃಖದ ವಿಚಾರ. ಮೃತ ಯುವಕನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಮುಖ್ಯಮಂತ್ರಿ 'X' ಖಾತೆಯಲ್ಲಿ ಸಂದೇಶ ಹಾಕಿದ್ದಾರೆ.  