ಬೆಂಗಳೂರು: ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಮುಂಜಾನೆ ಯಲಹಂಕದ ಎಲ್ ಬಿಎಸ್ ನಲ್ಲಿ ನಡೆದಿದೆ.ಗಾಯಾಳುಗಳಾದ ಅಫರ್ವಾಜ್, ಸಲ್ಮಾ, ಶಾಹಿದ್, ಫಸಿಯಾ, ಅಸ್ಮಾ ಎಂಬವರನ್ನು ಯಲಹಂಕ ಸರ್ಕಾರಿ ಆಸ್ಪತ್ರೆ ಹಾಗೂ ಗಂಭೀರ ಸುಟ್ಟಗಾಯಗಳಾದ ಒಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ  ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳು, ಕಿಟಕಿಗಳು, ಬಾಗಿಲುಗಳು ಛಿದ್ರವಾಗಿದ್ದು, ಪಕ್ಕದ ನಾಲ್ಕು ಮನೆಗಳಿಗೂ ಹಾನಿಯಾಗಿದೆ. ಮನೆಯ  ವಿದ್ಯುತ್ ಮೀಟರ್ ಬಾಕ್ಸ್,  ವಿದ್ಯುತ್ ಕೇಬಲ್ಗಳಿಗೂ ಹಾನಿಯಾಗಿದ್ದು, ತಕ್ಷಣಕ್ಕೆ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಗಳು ಅಲುಗಾಡಿವೆ.   ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. 