ಬೆಂಗಳೂರು: ಜನವರಿ 21ರಂದು ಮಂಗಳೂರಿನಲ್ಲಿ ನಿಗಧಿ ಮಾಡಲಾಗಿದ್ದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದ್ದು, ಸಮಾವೇಶದ ಮುಂದಿನ ದಿನಾಂಕವನ್ನು ಶೀಘ್ರದಲ್ಲಿದಲ್ಲಿಯೇ ತಿಳಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.ಈ ಸಂಬಂಧ ಪ್ರಕಟನೆ ಹೊರಡಿಸಿರುವ ಅವರು, ಜ. 21ರಂದು ಮಂಗಳೂರು ನಗರದಲ್ಲಿ ಆಯೋಜಿಸಲಾಗಿದ್ದ ಸಮಾವೇಶವನ್ನು ಮುಂದೂಡಿದ್ದು, ಶೀಘ್ರದಲ್ಲಿದಲ್ಲಿಯೇ ಹೊಸ ದಿನಾಂಕವನ್ನು ತಿಳಿಸಲಾಗುವುದು. ಈ ಹಿನ್ನೆಲೆಯಲ್ಲಿ ಸಮಾವೇಶ ನಡೆಸಲು ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಕಾರ್ಯಕ್ರಮವನ್ನು ಹಾಗೇಯೇ ಮುಂದುವರಿಸಲು ವಿನಂತಿಸಿಕೊಂಡಿದ್ದಾರೆ.