ಬೆಂಗಳೂರು: ಭಾರತ್ ಜೋಡೋ ನ್ಯಾಯ ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಮಣಿಪುರದ ಇಂಪಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪಕ್ಷದ ಮುಖಂಡರು ಸ್ವಾಗತ ಕೋರಿದರು. ಸಚಿವರಾದ ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ, ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.