ಶಿವಮೊಗ್ಗ :ರಾಜ್ಯ ಸರಕಾರದ ಐದನೇ ಗ್ಯಾರಂಟಿ ಯುವ ನಿಧಿಗೆ ಶುಕ್ರವಾರ ಸಿಎಂ ಸಿದ್ದರಾಮಯ್ಯ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ನಗರದ ಫ್ರೀಡಂ ಪಾರ್ಕ್‌ ನಲ್ಲಿ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಉಸತುವಾರಿ ಸಚಿವ ಮಧು ಬಂಗಾರಪ್ಪ ಸಹಿತ ಹಲವು ಸಚಿವರು ಭಾಗವಹಿಸಿದ್ದರು.2023-24ನೇ ಸಾಲಿನ ಯಾವುದೇ ವೃತ್ತಿಪರ ಕೋರ್ಸ್, ಪದವಿ, ಡಿಪ್ಲೋಮಾ ಉತ್ತೀರ್ಣರಾಗಿ ಆರು ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ.ಮುಂದಿನ 2 ವರ್ಷ ಪದವೀಧರರಿಗೆ ಮಾಸಿಕ 3000 ರೂ.ಮತ್ತು ಡಿಪ್ಲೋಮಾ ಮುಗಿಸಿದವರಿಗೆ ಮಾಸಿಕ 1500 ರೂ. ನಿರುದ್ಯೋಗ ಭತ್ತೆ ನೀಡಲಾಗುತ್ತದೆ. ಉದ್ಯೋಗ ಸಿಕ್ಕಿದ ಕೂಡಲೇ ಈ ಸೌಲಭ್ಯ ಸ್ಥಗಿತಗೊಳ್ಳಲಿದೆ.  