ಬೆಂಗಳೂರು: ಕರ್ನಾಟಕದ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವ ಪರೇಡ್‌ನಲ್ಲಿ  ಸೇರಿಸಲು ವಿನಂತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.ಈ ಕುರಿತು ʼಎಕ್ಸ್‌ʼ ನಲ್ಲಿ ಪೋಸ್ಟ್‌ ವೊಂದನ್ನು ಅವರು, ”ನಾನು ರಕ್ಷಣ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಲು ವಿನಂತಿಸಿ ಪತ್ರ ಬರೆದಿದ್ದೇನೆ. 7 ಕೋಟಿ ಕನ್ನಡಿಗರ ಆಳವಾದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ನಿರಾಕರಿಸುವುದು ಕೇವಲ ಪ್ರಮಾದವಲ್ಲ. ಇದು ನಮ್ಮ ರಾಜ್ಯದ ಹೆಮ್ಮೆಗೆ ಧಕ್ಕೆಯಾಗಿದೆ. ನಮ್ಮ ಸಾಧನೆಗಳು ರಾಷ್ಟ್ರೀಯ ವೇದಿಕೆಗೆ ಅರ್ಹವಾಗಿವೆ” ಎಂದು ಬರೆದಿದ್ದಾರೆ.I have written to Defence Minister Shri @rajnathsingh, requesting the inclusion of Karnataka's tableau in the Republic Day parade.In my letter to Defence Minister Shri Rajnath Singh, I've expressed the deep sentiment of 7 crore Kannadigas. Denying Karnataka's tableau in the… pic.twitter.com/ozAd2OfiqK 