ತುಮಕೂರು: 9ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾದ ಘಟನೆ ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ನಡೆದಿದ್ದು, ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಚಲನವಲನವನ್ನು ಗಮನಿಸದ ಹಾಸ್ಟೆಲ್ ವಾರ್ಡನ್ ರನ್ನು  ಕರ್ತವ್ಯ ಲೋಪ ಹಿನ್ನೆಲೆ ಅಮಾನತು ಮಾಡಲಾಗಿದೆ.ಬಾಲಕಿಯು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ‌‌ ನಿವಾಸಿಯಾಗಿದ್ದು, ಮಧುಗಿರಿ ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿದ್ದುಕೊಂಡು 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಏಳು ತಿಂಗಳ ಗರ್ಭಿಣಿಯಾಗಿದ್ದ ವಿದ್ಯಾರ್ಥಿನಿ, ಹೊಟ್ಟೆ ನೋವಿನಿಂದ ತಾಯಿಯ ಜೊತೆಗೆ ಆಸ್ಪತ್ರೆಗೆ ತೆರಳಿದ್ದಾಗಿ ಪ್ರಕರಣ ಬೆಳಕಿಗೆ ಬಂದಿದೆ.ವೈದ್ಯರು ಮಂಗಳವಾರ ಶಸ್ತ್ರಚಿಕಿತ್ಸೆಯ ಮೂಲಕ ಮಗುವನ್ನು ಹೊರತೆಗೆದಿದ್ದು,  ಈ ಬಗ್ಗೆ ವೈದ್ಯರು  ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು.ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕರ್ತವ್ಯಲೋಪದಡಿ ಹಾಸ್ಟೆಲ್ ವಾರ್ಡನ್ ನಿವೇದಿತಾ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ‌ ಜಿ.ಪ್ರಭು ಆದೇಶ ಹೊರಡಿಸಿದ್ದಾರೆ.