ಕೊಪ್ಪಳ: ಹುಬ್ಬಳ್ಳಿಯ ಗಲಭೆಯಲ್ಲಿ ಭಾಗಿಯಾದ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.ಇಂದು ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡಿದವರನ್ನು  ಸುಮ್ಮನೆ ಬಿಟ್ಟುಬಿಡಬೇಕೇ?,  ಹಳೇ ಪ್ರಕರಣಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ. ಅದರ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂದರು. ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವುದು ಕಷ್ಟಅತಿಥಿ ಉಪನ್ಯಾಸಕರೊಂದಿಗೆ ಮಾತನಾಡಿದ್ದರೂ  ಪಾದಯಾತ್ರೆ ಮಾಡುತ್ತಿದ್ದಾರೆ. ಅವರನ್ನು ಖಾಯಂ ಮಾಡಿ ಎಂಬ ಬೇಡಿಕೆ ಇದೆ. ಆದರೆ ಖಾಯಂ ಮಾಡುವುದು ಕಷ್ಟದ ಕೆಲಸ ಎಂದು ಹೇಳಿದರು.ರಾಮಮಂದಿರ ಉದ್ಘಾಟನೆಗೆ ಕೇವಲ ರಾಮಭಕ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂದು ರಾಮಮಂದಿರದ ಮುಖ್ಯ ಅರ್ಚಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ  ಯಾರಿಗೆ ಆಹ್ವಾನ ಹೋಗಿದೆ , ಬಿಟ್ಟಿದೆ ಎಂದು ಗೊತ್ತಿಲ್ಲ ಆಹ್ವಾನ ಕೊಟ್ಟವರು ಹೋಗುತ್ತಾರೆ, ಇಲ್ಲದವರು ಇಲ್ಲ  ಎಂದರು.ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ  ರೈತರಿಗೆ ಪರಿಹಾರ ತಲುಪಲಿದೆ ಎಂದರು.