ಬೆಂಗಳೂರು: ನಾಡಪ್ರಭು ಕೆಂಪೇಗೌಡ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿರುವ ಆರೋಪದ ಮೇಲೆ ನಟ ಚೇತನ್ ಅಹಿಂಸಾ ವಿರುದ್ಧ ಇಲ್ಲಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವುದಾಗಿ ವರದಿಯಾಗಿದೆ.  ವಕೀಲ ಆರ್.ಎಲ್.ಎನ್ ಮೂರ್ತಿ ಎಂಬುವವರು ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೋಸ್ಟ್‌ ನಲ್ಲಿ  ಏನಿದೆ?: ‘ಇಬ್ಬರು ಯೋಧರ ಕಥೆ: ಕೆಂಪೇಗೌಡ-ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್- ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ.  ದುರಾದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ' ಎಂದು ನಟ ಚೇತನ್ ಅಹಿಂಸಾ ಅವರು ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಪ್ರಕಟಿಸಿದ್ದರು.  ಇದರಿಂದಾಗಿ ನಾಡಪ್ರಭು ಕೆಂಪೇಗೌಡರಿಗೆ ಅಗೌರವ ತೋರಿ, ಅವಹೇಳನ ಮಾಡಲಾಗಿದೆ ಎಂದು ವಕೀಲ ಆರ್.ಎಲ್.ಎನ್ ಮೂರ್ತಿಯವರು ದೂರು ನೀಡಿದ್ದು, ಅದರನ್ವಯ ಪೊಲೀಸರು ಎನ್.ಸಿ.ಆರ್ ದಾಖಲಿಸಿಕೊಂಡಿರುವುದಾಗಿ ಗೊತ್ತಾಗಿದೆ.pic.twitter.com/BKsZ8XeSS6  