ತುಮಕೂರು, ಡಿ.15: ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.ಕೌತಮಾರನಹಳ್ಳಿ ಗ್ರಾಮದ ನಿವಾಸಿಗಳಾದ ಪ್ರೀತಮ್(15) ಮತ್ತು ವಿಜಯಕುಮಾರ್(15)  ಮೃತಪಟ್ಟವರು. ಇವರಿಬ್ಬರು ಕ್ಯಾತಸಂದ್ರದ ಸರಕಾರಿ ಪ್ರೌಢಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ.  ಗುರುವಾರ ರಾತ್ರಿ 10:30ರ ವೇಳೆ ಈ ಅಪಘಾತ ಸಂಭವಿಸಿದೆ. ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿಯಲ್ಲಿ ಎಫ್.ಡಿ.ಎ. ಆಗಿರುವ ಪ್ರೀತಮ್ ಅವರ ಸಹೋದರಿಯನ್ನು ಕರೆದುಕೊಂಡು ಬರಲು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.   ಈ ಬಗ್ಗೆ ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  