Photo: PTIಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಬಂಧಿತರಾಗಿರುವ ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳಿಗೆ ಸೆಪ್ಟೆಂಬರ್ 12ರವರೆಗೂ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ನಗರದ 24ನೇ ಎಸಿಎಂಎಂ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ.ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಸೋಮವಾರಂದು ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಆಯಾ ಕಾರಾಗೃಹಗಳಿಂದಲೇ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.  ಪ್ರಕರಣಕ್ಕೆ ಸಂಬಂಧಿಸಿದಂತೆ 60 ಡಿಜಿಟಲ್ ಸಾಕ್ಷ್ಯಗಳನ್ನೊಳಗೊಂಡ ಹಾರ್ಡ್ ಡಿಸ್ಕ್, ಪೆನ್‍ಡ್ರೈವ್ ಅನ್ನು ಸರಕಾರದ ಪರ ವಕೀಲ ಪ್ರಸನ್ನ ಕುಮಾರ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದರು. ಹಾಗೂ ಆರೋಪಿಗಳ ಪ್ರತಿಯನ್ನು ಎರಡು ದಿನಗಳಲ್ಲಿ ನೀಡಲಿದ್ದೇವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.  