ದರ್ಶನ್\ರೇಣುಕಾಸ್ವಾಮಿಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಂಧಿತ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ನಾಳೆ(ಸೆ.9) ಮುಕ್ತಾಯಗೊಳ್ಳಲಿದ್ದು, ಆರೋಪಿಗಳು ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.  ನಟ ದರ್ಶನ್ ಸೇರಿ ಪ್ರಕರಣದ ಎಲ್ಲ ಆರೋಪಿಗಳು ನಾಳೆ(ಸೆ.9) ವಿವಿಧ ಜೈಲುಗಳಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ನಗರದ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾರೆ ಎಂದು ತಿಳಿದುಬಂದಿದೆ.  ಇದೇ ವೇಳೆ ಪೊಲೀಸರು ಸಲ್ಲಿಸಿರುವ ಚಾರ್ಜ್‍ಶೀಟ್ ಎಲ್ಲಾ 17 ಆರೋಪಿಗಳ ಕೈ ಸೇರಲಿದ್ದು, ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಮುಖ ಆರೋಪಿಗಳು ನಾಳೆಯೇ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ.  