Photo: PTIಬೆಂಗಳೂರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶನಿವಾರ (ನ.25) ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ.ಹೊಸದಿಲ್ಲಿಯಿಂದ ವಿಶೇಷ ವಿಮಾನದಲ್ಲಿ ಪ್ರಯಾಣಿಸಲಿರುವ ಪ್ರಧಾನಿ ಮೋದಿ ನಾಳೆ ಬೆಳಗ್ಗೆ 9.15ಕ್ಕೆ HAL ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12.15ಕ್ಕೆ ತೆಲಂಗಾಣಕ್ಕೆ ಪ್ರಯಾಣ ಬೆಳೆಸಲಿದ್ದಾರೆ.