ಎಚ್.​ಡಿ.ಕುಮಾರಸ್ವಾಮಿಶಿವಮೊಗ್ಗ : ಕೋವಿಡ್​ ಹಗರಣದ ತನಿಖಾ ವರದಿಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಸಂಪುಟದಲ್ಲಿ ಚರ್ಚೆಯಾಗಲಿದೆ ಎಂದು ಮಾಧ್ಯಮಗಳ ವರದಿಯಲ್ಲಿ ನೋಡಿದ್ದೇನೆ. ಕೆಂಪಣ್ಣ ಆಯೋಗದ ವರದಿ ಬಗ್ಗೆಯೂ ಸಂಪುಟದಲ್ಲಿ ಚರ್ಚಿಸಲಿ ಎಂದು ಕೇಂದ್ರ ಸಚಿವ ಎಚ್.​ಡಿ.ಕುಮಾರಸ್ವಾಮಿ ಸಲಹೆ ನೀಡಿದರು.ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಂಪಣ್ಣ ಆಯೋಗದ ವರದಿಯನ್ನು ಏಕೆ ಕ್ಯಾಬಿನೆಟ್ ಮುಂದೆ ತರದೆ ಬಿಟ್ಟಿದ್ದಾರೆ ಎಂದು ಪ್ರಶ್ನಿಸಿದರು.ಮುಡಾ ಹಿಂದಿನ ಆಯುಕ್ತ ದಿನೇಶ್​ ಕುಮಾರ್ ಅಮಾನತು ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕೋರ್ಟ್​​ನಲ್ಲಿ ಈ ಪ್ರಕರಣದ ಬಗ್ಗೆ ವಾದ ಪ್ರತಿವಾದ ಆಗಿದೆ. ಸಿಎಂ ಪರ ವಕೀಲರು ವಾದ ಮಾಡಲು ಸಮಯ ಕೇಳುತ್ತಿದ್ದಾರೆ ಎಂದರು.