ರಜನೀಶ್ ಗೋಯಲ್ (Photo credit: newindianexpress.com)ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ  ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. 1986 ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ರಜನೀಶ್ ಈಗ ಗೃಹ ಇಲಾಖೆಯ ಹೆಚ್ಚಿವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನ.30ಕ್ಕೆ ನಿವೃತ್ತರಾಗಲಿರುವ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಸ್ಥಾನಕ್ಕೆ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.