ಬೆಂಗಳೂರು, ನ.20: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಪ್ರಕರಣದಲ್ಲಿ ಸಚಿವ ಝಮೀರ್ ಅಹ್ಮದ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.ಪ್ರಕರಣ ರದ್ದು ಕೋರಿ ಸಚಿವ ಝಮೀರ್ ಅಹ್ಮದ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ವಜಾಗೊಳಿಸಿ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಹೊರಡಿಸಿದೆ.   80.44 ಕೋಟಿ ಆದಾಯ ಮೀರಿ ಅಕ್ರಮ ಆಸ್ತಿ ಪ್ರಕರಣದಲ್ಲಿ ಝಮೀರ್ ವಿರುದ್ಧ ಎಸಿಬಿ ಕೇಸ್ ದಾಖಲಿಸಿತ್ತು. 80.44 ಕೋಟಿ ರೂ.ಮೌಲ್ಯದ ಆದಾಯ ಮೀರಿ ಅಕ್ರಮ ಆಸ್ತಿ ಮಾಡಿದ ಆರೋಪ ಝಮೀರ್ ಮೇಲಿದೆ. ಈ ಬಗ್ಗೆ ಎಸಿಬಿ ಪ್ರಕರಣ ದಾಖಲಿಸಿತ್ತು. ಪ್ರಕರಣ ರದ್ದುಗೊಳಿಸುವಂತೆ ಝಮೀರ್ ಅಹ್ಮದ್ ಅರ್ಜಿ ಸಲ್ಲಿಸಿದ್ದರು.    